SSLC ವಿದ್ಯಾರ್ಥಿಗಳ ಗಮನಕ್ಕೆ

ಸ್ನಾನು ಈಗಾಗಲೇ ಪ್ರಕಟಿಸಿದಂತೆ, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ #ದೂರದರ್ಶನದ_ಚಂದನ_ವಾಹಿನಿಯಲ್ಲಿ

#ಏ_29ರಿಂದ

#ಪುನರ್ಮನನ (Revision) ತರಗತಿಗಳನ್ನು ಆರಂಭಿಸಲಾಗುತ್ತಿದೆ.

ಈ ತರಗತಿಗಳು ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ.

ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ #ಗಣಿತ ಹಾಗೂ #ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ.

18ನೇ ದಿನದಿಂದ #ಸಮಾಜ_ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು,

 ನಂತರದ ದಿನಗಳಲ್ಲಿ ₹ಕನ್ನಡ ಮತ್ತು #ಆಂಗ್ಲ_ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ.

 ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ.

ನನ್ನೆಲ್ಲ ವಿದ್ಯಾರ್ಥಿ ಮಿತ್ರರು ಈ ಮಹತ್ವದ ತರಗತಿಗಳನ್ನು ತಪ್ಪದೇ ವೀಕ್ಷಿಸಿ ಮುಂಬರುವ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುತ್ತೀರೆಂಬ ವಿಶ್ವಾಸ ನನ್ನದು.

ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವ.

ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು